ಮಡಿಕೇರಿ ; SSLC ಯಲ್ಲಿ ಪಾಸ್ ಆದ ಶಾಲೆಯ ಏಕೈಕ ವಿದ್ಯಾರ್ಥಿನಿ ಇದೀಗ ಹತ್ಯೆಯಾದ ಘಟನೆ ಕೊಡಗಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ.
ಇಂದು ಪ್ರಕಟಿಸಿದ್ದ ಫಲಿತಾಂಶದಲ್ಲಿ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ಶೇ.100 ಫಲಿತಾಂಶ ಪಡೆದಿದ್ದಳು ಆದರೆ ಇದೀಗ ಅವಳ ಕಗ್ಗೊಲೆ ನಡೆದಿದ್ದು ದುಷ್ಕರ್ಮಿಗಳು ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ವಿದ್ರಾಹಕ ಘಟನೆ ವರದಿಯಾಗಿದೆ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು ಇಂದು ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಕೊಲೆ ಮಾಡಿದ್ದಾನೆ ಆರೋಪಿ ವಿರೂಪಾಕ್ಷ.
ಬಾಲಕಿಯನ್ನು ಆರೋಪಿ ವಿರೂಪಾಕ್ಷ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೋಲಿಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.