Sunday, March 15, 2026
Flats for sale
Homeದೇಶಮಹಾರಾಷ್ಟ್ರ : ಏಕನಾಥ್ ಶಿಂಧೆ ಸರ್ಕಾರದಿಂದ ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ...

ಮಹಾರಾಷ್ಟ್ರ : ಏಕನಾಥ್ ಶಿಂಧೆ ಸರ್ಕಾರದಿಂದ ಮರಾಠರಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರ.

ಮುಂಬೈ : ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಶೇಕಡಾ 10 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯು ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯಿದೆ 2018 ರಂತೆಯೇ ಈ ಮಸೂದೆಯೂ ಇರುತ್ತದೆ ಎಂದು ಮೂಲಗಳು ತಿಳಿಸಿವೆ.ಮರಾಠ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಕರ್ತ ಮನೋಜ್ ಜಾರಂಗೆ ಅವರ ನಿರಂತರ ಪ್ರತಿಭಟನೆಯ ನಡುವೆ ಈ ವರ್ಷ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಮರಾಠ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಮೀಸಲಾತಿ ಮಸೂದೆ ಜಾರಿ ಮಾಡಿಕೊಂಡಿದೆ. ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಸರ್ಕಾರ ಪರಿಚಯಿಸಿದ್ದ ವಿಧೇಯಕವನ್ನೇ ಮುಂದುವರಿಸಲಾಗಿದೆ ಎಂದು ಉಲ್ಲೇಖಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular