Thursday, March 12, 2026
Flats for sale
Homeವಾಣಿಜ್ಯಮುಂಬೈ : ಟಾಟಾ ಟ್ರಸ್ಟ್‌ ಅಧ್ಯಕ್ಷ ಸ್ಥಾನಕ್ಕೆ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ..!

ಮುಂಬೈ : ಟಾಟಾ ಟ್ರಸ್ಟ್‌ ಅಧ್ಯಕ್ಷ ಸ್ಥಾನಕ್ಕೆ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ..!

ನವದೆಹಲಿ : ಮುಂಬೈನಲ್ಲಿ ಇಂದು ನಡೆದ ಮಂಡಳಿ ಸಭೆಯ ನಂತರ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರನ್ನು ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬುಧವಾರ ಮುಂಬೈ ಆಸ್ಪತ್ರೆಯಲ್ಲಿ 86 ನೇ ವಯಸ್ಸಿನಲ್ಲಿ ಮೃತಪಟ್ಟಿದ್ದರು ಈ ಹಿನ್ನೆಲೆ ಅವರ ಉತ್ತರಾಧಿಕಾರಿಯಾಗಿ ನೋಯೆಲ್ ರವರನ್ನು ನೇಮಿಸಲಾಗಿದೆ.

ನೋಯೆಲ್ ಟಾಟಾ ಅವರು ಸೇರಿದಾಗಿನಿಂದ ಟಾಟಾ ಗ್ರೂಪ್‌ನ ಬೆಳವಣಿಗೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಸರ್ ರತನ್ ಟಾಟಾ ಟ್ರಸ್ಟ್ ಮತ್ತು ದೊರಾಬ್ಜಿ ಟಾಟಾ ಟ್ರಸ್ಟ್‌ನ ಸಭೆಯ ನಂತರ ಅವರನ್ನು ಇಂದು ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಮುಂಬೈ: ಟಾಟಾ ಟ್ರಸ್ಟ್‌ ಅಧ್ಯಕ್ಷ ಸ್ಥಾನಕ್ಕೆ ರತನ್ ಟಾಟಾ ಅವರ ಮಲಸಹೋದರ ಹಾಗೂ ಟ್ರೆಂಟ್ ಅಧ್ಯಕ್ಷ ನೋಯೆಲ್ ಟಾಟಾ ಅವರನ್ನು ಆಯ್ಕೆ ಮಾಡಲಾಗಿದೆ. 67 ವರ್ಷದ ನೋಯೆಲ್ ಈಗಾಗಲೇ ಸರ್ ದೊರಾಬ್ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್‌ನ ಟ್ರಸ್ಟಿಯಾಗಿದ್ದಾರೆ, ಇದು ಟಾಟಾ ಸನ್ಸ್‌ನಲ್ಲಿ 66% ಪಾಲನ್ನು ಹೊಂದಿದೆ. 2019ರಲ್ಲಿ ಸರ್ ರತನ್ ಟಾಟಾ ಟ್ರಸ್ಟ್‌ನ ಟ್ರಸ್ಟಿಯಾಗಿ ಸೇರಿಕೊಂಡಿದ್ದ ಇವರು 2022ರಲ್ಲಿ ಸರ್ ದೊರಾಬ್ಜಿ ಟ್ರಸ್ಟ್ ಮಂಡಳಿಗೂ ನೇಮಕಗೊಂಡಿದ್ದರು. ರತನ್‌ ಟಾಟಾ ಅವರ ತಂದೆ ನೇವಲ್ ಎರಡು ಮದುವೆಯಾಗಿದ್ದರು. ಮೊದಲ ಪತ್ನಿ ಸೂನಿ ಕಮಿಶರಿಯಟ್, ಎರಡನೇ ಪತ್ನಿ ಸ್ವಿಟ್ಜರ್ಲೆಂಡ್‌ನ ಉದ್ಯಮಿ ಸಿಮೋನ್ ಡ್ಯುನೊಯರ್‌. ನೇವಲ್ ಮತ್ತು ಸೂನಿ ದಂಪತಿಗೆ ರತನ್‌ ಮತ್ತು ಜಿಮ್ಮಿ ಟಾಟಾ ಜನಿಸಿದರು. 1940 ರದಶಕದಲ್ಲಿ ನೇವಲ್ ಮತ್ತು ಸೂನಿ ದಂಪತಿ ಬೇರ್ಪಟ್ಟಿದ್ದರು. ಬೇರ್ಪಟ್ಟ ನಂತರ ಸಿಮೋನ್ ಡ್ಯುನೊಯರ್‌ ಅವರನ್ನು 1955 ರಲ್ಲಿ ನೇವಲ್ ವಿವಾಹವಾದರು. ಈ ದಂಪತಿಯ ಪುತ್ರನೇ ನೇಯಲ್‌ ಟಾಟಾ.

ಟಾಟಾ ಟ್ರಸ್ಟ್‌ನ ಉತ್ತರಾಧಿಕಾರಿಯಾಗಿ ನೋಯೆಲ್ ಟಾಟಾ ಅವರನ್ನೇ ಆಯ್ಕೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಈಗ ಅಧಿಕೃತವಾಗಿ ಹೆಸರು ಘೋಷಣೆಯಾಗಿದೆ. ನೋಯೆಲ್ ಅವರನ್ನು ಆಯ್ಕೆ ಮಾಡುವ ಮೂಲಕ ಟಾಟಾ ಕುಟುಂಬದ ಸದಸ್ಯರ ಬಳಿಯೇ ಅಧಿಕಾರ ಉಳಿಸಿದಂತೆ ಆಗುತ್ತದೆ ಎಂಬ ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular