ಮುಂಬೈ : ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) ) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡ ಇದೆ ಎಂದು ತಿಳಿದುಬಂದಿದೆ.
ಆರೋಪಿಗಳಿಬ್ಬರನ್ನೂ ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದು, ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.
ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ (Mumbai Police) ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ. ಆರೋಪಿಗಳು ಕಳೆದ 25-30 ದಿನಗಳಿಂದ ಈ ಕೃತ್ಯ ಎಸಗಲು ಸಿದ್ಧತೆ ನಡೆಸಿದ್ದರು. ಮೂವರು ಆರೋಪಿಗಳು ಆಟೋ ರಿಕ್ಷಾದ ಮೂಲಕ ಬಾಂದ್ರಾ ಪೂರ್ವಕ್ಕೆ ಬಂದಿದ್ದರು. ಮೂವರು ಆರೋಪಿಗಳು ಅಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಬಾಬಾ ಸಿದ್ದಿಕಿ ಬರುವವರೆಗೆ ಕಾಯುತ್ತಿದ್ದರು. ಇದಾದ ಬಳಿಕ ಬಾಬಾ ಸಿದ್ದಿಕಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.
ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.


