Friday, March 13, 2026
Flats for sale
Homeಜಿಲ್ಲೆಮೂಡಬಿದರೆ : ನಾಲ್ವರು ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ತಲವಾರು ದಾಳಿ,ಗಂಭೀರ ಗಾಯ.

ಮೂಡಬಿದರೆ : ನಾಲ್ವರು ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ತಲವಾರು ದಾಳಿ,ಗಂಭೀರ ಗಾಯ.

ಮೂಡಬಿದರೆ : ಜಿಲ್ಲೆಯಲ್ಲಿ ಮತ್ತೊಮ್ಮೆ ತಲಾವಾರಿನ ಸದ್ದು ಕೇಳಿಬಂದಿದೆ. ದ.ಕ ಜಿಲ್ಲೆಯ ಮೂಡಬಿದರೆ ತಾಲೂಕಿನ ಎಡಪದವು ಎಂಬಲ್ಲಿ ಯುವಕನೋರ್ವನಿಗೆ 4 ಮಂದಿ ದುಷ್ಕರ್ಮಿಗಳು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ಎಂದು ತಿಳಿದುಬಂದಿದೆ.

ಇವರು ಸ್ಥಳಿಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದು ಕೆಲಸಮುಗಿಸಿಕೊಂಡು ಎಂದಿನಂತೆ ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ಮಾಡಿದ್ದಾರೆ. ಇವರ ಬಲಕೈಗೆ ತಲವಾರು ದಾಳಿಯ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಅಖಿಲೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ .

RELATED ARTICLES

LEAVE A REPLY

Please enter your comment!
Please enter your name here

Most Popular