ಮೈಸೂರು : ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಕೊನೆಗೆ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ಏರಿಕೆ ಮಾಡಿದೆ. ಸಚಿವ ಸಂಪುಟ ಟಿಕೆಟ್ ದರ ಏರಿಕೆ ಮಾಡುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಡಬ್ಲ್ಯುಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಈ ಹಿಂದೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್ಆರ್ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ ಎಂಬ ಮಾಹಿತಿ ದೊರೆತಿದೆ.
ಇಂದಿನಿಂದ ಕೆಎಸ್ಆರ್ ಟಿಸಿ ಬಸ್ ದರ ಏರಿಕೆ ಯಾಗಿದ್ದು 15% ಬಸ್ ದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.ಮದ್ಯ ರಾತ್ರಿಯಿಂದಲೇ ನೂತನ ದರ ಜಾರಿಯಾಗಿದ್ದು ಮೈಸೂರಿನಿಂದ ಟಿ ನರಸೀಪುರಕ್ಕೆ ನಿನ್ನೆ 42ರೂ ಇದ್ದ ಬಸ್ ಟಿಕೆಟ್ ದರ ಇಂದು 15%ಹೆಚ್ಚಳ ಹಿನ್ನೆಲೆ 48ಕ್ಕೆ ಏರಿದೆ ಎಂದು ಪ್ರಯಾಣಿಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.


