Friday, July 3, 2026
Homeರಾಜ್ಯಮೈಸೂರು/ಚಿಕ್ಕಮಗಳೂರು : ಮೈಸೂರು–ಚಿಕ್ಕಮಗಳೂರು ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ ; ತೀವ್ರ ತಪಾಸಣೆ.

ಮೈಸೂರು/ಚಿಕ್ಕಮಗಳೂರು : ಮೈಸೂರು–ಚಿಕ್ಕಮಗಳೂರು ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ ; ತೀವ್ರ ತಪಾಸಣೆ.

ಮೈಸೂರು/ಚಿಕ್ಕಮಗಳೂರು : ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಎರಡೂ ನ್ಯಾಯಾಲಯಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

ಮೈಸೂರಿನ ಜಯನಗರದಲ್ಲಿರುವ ನ್ಯಾಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇ-ಮೇಲ್ ಕಳುಹಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕವಾಗಿ ಇದು ಹುಸಿ ಬೆದರಿಕೆ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕಳೆದ ವಾರವೂ ಮೈಸೂರಿನ ಎರಡು ಖಾಸಗಿ ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಇದೇ ರೀತಿಯ ಇ-ಮೇಲ್ ಬಂದಿದ್ದು, ಪರಿಶೀಲನೆ ಬಳಿಕ ಅದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿತ್ತು.

ಇದೇ ವೇಳೆ, ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 1.30ರಿಂದ 3.30ರೊಳಗೆ ಸ್ಫೋಟ ನಡೆಸುವುದಾಗಿ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಇ-ಮೇಲ್ ಬಂದ ತಕ್ಷಣ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಪೊಲೀಸ್ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದರು. ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದ ವೇಳೆಯೇ ಶೋಧ ಕಾರ್ಯ ಕೈಗೊಳ್ಳಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆದರಿಕೆ ಇ-ಮೇಲ್ ಕಳುಹಿಸಿದವರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular