ಮೈಸೂರು : ಕೊಳ್ಳೇಗಾಲ, ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರು (Mysuru) ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ್, ಶಶಿಕುಮಾರ್, ಮಗು ಪುನೀತ್ ಗಂಭೀರ ಗಾಯಗೊಂಡರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಈ ಅಪಘಾತ (Accident) ಸಂಭವಿಸಿದ್ದು, ಇನೋವಾ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಟಿ.ನರಸೀಪುರ ಪೋಲೀಸ್ ಠಾಣೆ ವ್ಯಾಪ್ತಿಯ ಕುರುಬೂರು ಗ್ರಾಮದ ಪಿಂಜರ ಪೋಲ್ ಪೋಲ್ ಬಳಿ ನಡೆದ ಘಟನೆ ನಡೆದಿದೆ. ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತರು ಬಳ್ಳಾರಿಯಿಂದ ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು.
ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.
ಮೃತ ಹತ್ತುಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


