ಮೈಸೂರು : ಕಳೆದ ವಾರ ಹುಲಿ,ಆನೆ,ಕಾಡು ಹಂದಿಯಂತಹ ಕಾಡು ಪ್ರಾಣಿಗಳು ಮನುಷ್ಯನ ಮೇಲೆ ದಾಳಿ ಮಾಡಿದ್ದು ಮತ್ತೊಮ್ಮೆ ನಂಜನಗೂಡಿನ ಆಸುಪಾಸಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ. ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಆಹಾರ ಅರಸಿಕೊಂಡು ನಾಡಿನತ್ತ ಬರುತ್ತಿರುವ ಆನೆ ಚಿರತೆ ಹುಲಿಗಳು ಜನರನ್ನು ಭಯ ಭೀತರನ್ನಾಗಿಸುತ್ತಿವೆ. ಹುಲಿ ಚಿರತೆ ಕಾಟಕ್ಕೆ ಜನ ರೋಸಿ ಹೋಗಿದ್ದಾರೆ. ನವೆಂಬರ್ 22 ರಂದು ಮೈಸೂರಿನ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದರು. ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಾ ಈ ಚಿರತೆ ಉಪಟಳ ಕೊಡ್ತಿತ್ತು. ಸಾಕುನಾಯಿ, ದನ, ಕರುಗಳನ್ನು ಕೊಂದು ಹಾಕಿದ್ದ ಚಿರತೆ ಸೆರೆಗೆ ರೈತ ಮಹೇಶ್ ಎಂಬುವವರ ಜಮೀನಿನಲ್ಲಿ ಬೋನು ಇಡಲಾಗಿತ್ತು.
ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.