ಮೈಸೂರು : ರಾಜಕೀಯ ಅಂದರೆ ಅಷ್ಟೇ ಯಾವುದು ಪರ್ಮನೆಂಟ್ ಅಲ್ಲ ಎಂಬ ಮನಸ್ಥಿತಿ ಇರಬೇಕು ಇದೀಗ ಮೈಸೂರಿನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ.ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಧೀಡೀರನೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದೂ ಅಭಿಮಾನಿಗಳಲ್ಲಿ ಆಘಾತ ನೀಡಿದೆ.ಆದರೆ ಈ ರಾಜಾಕಾರಣಿಗಳ ಮನಸ್ಸು ಯಾವಾಗ ಬದಲಾಗುತ್ತೆ ಎಂಬುದು ಮುಂದೆ ಕಾದು ಬೇಕಾಗುತ್ತದೆ.
ನನಗೆ ವಯಸ್ಸಾಗುತ್ತಿದೆ,ಆರೋಗ್ಯದ ದೃಷ್ಟಿಯಿಂದ ನನಗೂ ರೆಸ್ಟ್ ಬೇಕು ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.ನನಗೆ ಮೊದಲಿನಂತೆ ಉತ್ಸಾಹ ಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕ ಇಲ್ಲ. ಆತಂಕ ಇದ್ದರೆ ಮಾತ್ರ ಟೆನ್ಷನ್ ಇರುತ್ತದೆ. ನನಗೆ ಆ ರೀತಿ ಏನು ಇಲ್ಲ. ಹೀಗಾಗಿ ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ತಿಳಿಸಿದರು.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಅನುಕಂಪದ ಅಲೆಯನ್ನು ಸೃಷ್ಟಿಸಲು ಎಲ್ಲಾ ರಾಜಕೀಯ ನಾಯಕರು ಈ ಅಸ್ತ್ರವನ್ನು ಉಪಯೋಗಿಸುತಿದ್ದು ಹಿಂದೆಯೂ ನಿವೃತ್ತಿ ಬಗ್ಗೆ ಮಾತನಾಡಿದ್ದರು.ಈ ಹಿಂದೆಯು ಕೆಲವು ಭಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತು ಮಾತನಾಡಿದ್ದು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ.


