Wednesday, March 18, 2026
Flats for sale
Homeರಾಜ್ಯಮೈಸೂರು : ಮೈಸೂರು ಅರಮನೆ ಮುಂಭಾಗ ಭೀಕರ ಸ್ಫೋಟ,ಓರ್ವ ಸಾವು.

ಮೈಸೂರು : ಮೈಸೂರು ಅರಮನೆ ಮುಂಭಾಗ ಭೀಕರ ಸ್ಫೋಟ,ಓರ್ವ ಸಾವು.

ಮೈಸೂರು : ಮೈಸೂರು ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು ಸ್ಪೋಟದ ರಭಸಕ್ಕೆ ಬಲೂನ್​ ಮರುವಾತನ ದೇಹ ಛಿದ್ರಗೊಂಡು ಮೃತಪಟ್ಟ ಘಟನೆ ನಡೆದಿದೆ.

ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆಮುಂಭಾಗದಲ್ಲಿ ನಡೆದಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ಓರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಬೆಂಗಳೂರು ಮೂಲದ ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ. ಇನ್ನು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ , ರಾಣೆಬೆನ್ನೂರು ಮೂಲದ ಕೊಟ್ರೇಶ್​ ಎಂಬುವರಿಗೂ ಗಾಯಗಳಾಗಿದ್ದು, ಸದ್ಯ ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಅರಮನೆ ಮುಂಭಾಗ ಮಕ್ಕಳ ಆಟಿಕೆ ಸಾಮಾನುಗಳು, ತಿಂಡಿ ತಿನಿಸು ವ್ಯಾಪರ ಜೋರು ಇರುತ್ತೆ. ಅದರಲ್ಲೂ ಮಕ್ಕಳ ಪ್ರಮುಖ ಆಕರ್ಷಣೆಯಾಗಿರುವ ನೈಟ್ರೋಜನ್ ಬಲೂನ್ ಎಲ್ಲೆಡೆ ಲಭ್ಯವಿದೆ. ಹೀಗೆ ಅರಮನೆಯ ಜಯಮಾರ್ತಂಡ ದ್ವಾರ ಬಳಿ ನೈಟ್ರೋಜನ್ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಬಳಿ ಗ್ರಾಹಕರು ಬಲೂನ್ ಖರೀದಿಸಲು ತೆರಳಿದ್ದಾರೆ. ಈ ವೇಳೆ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಸ್ಫೋಟವಾಗಿದೆ. ಗ್ಯಾಸ್ ಬಲೂನ್ ಸಿಡಿದ ಬೆನ್ನಲ್ಲೇ ನೈಟ್ರೋಜನ್ ಸಿಲಿಂಡರ್ ಸ್ಫೋಟಗೊಂಡಿದ್ದು, ಬಲೂನ್ ಮಾರುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ನಝರ್ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular