ಮೈಸೂರು : ಈ ಬಾರಿ ಅಕ್ಟೋಬರ್ 3ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೊಳ್ಳಲಿದ್ದು, ಮೈಸೂರು ದಸರಾಗೆ ದಿನಾಂಕ ನಿಗದಿಯಾಗಿದೆ. ಇದೇ ಅ.3 ರಿಂದ ಅ.12 ರ ವರೆಗೆ ಮೈಸೂರು ದಸರಾ ಮಹೋತ್ಸವ ಜರುಗಲಿದೆ.ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮೈಸೂರು ಉದ್ಘಾಟನೆ ಯಾರಿಂದ ಮಾಡಿಸಬೇಕು ಎಂಬುದುನ್ನು ನನಗೆ ಸಭೆಯಲ್ಲಿ ಸರ್ವಾನುಮತದಿಂದ ಅಧಿಕಾರ ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅವರು ಕೆಲವು ತೀರ್ಮಾನವನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆ ಆಗಿದೆ. ರೈತರು ಹರ್ಷದಿಂದ ಇದ್ದಾರೆ. ಬೆಳೆ ಚೆನ್ನಾಗಿ ಬರ್ತಿದೆ. ಎಲ್ಲಾ ಜಲಾಶಯಗಳು ತುಂಬಿವೆ. ಕಳೆದ ವರ್ಷ ಬರ ಇತ್ತು. ಹೀಗಾಗಿ ಸರಳವಾಗಿ ಆಚರಣೆ ಮಾಡಿದ್ವಿ. ಈ ಬಾರಿ ವಿಜೃಂಭಣೆಯಿಂದ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದರು.
ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. ಗಜಪಯಣ, ಅಭಿಮನ್ಯು ಸೇರಿ 14 ಆನೆ ಭಾಗಿ ಆಗಲಿವೆ. ಪ್ರಥಮ ಹಂತದಲ್ಲಿ 9, 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ. ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ.
ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ. ಹೀಗೆ ಒಟ್ಟು 13 ಗಂಡು ಆನೆ, 5 ಹೆಣ್ಣು ಆನೆಗಳು ಜಂಬೂಸವಾರಿಯಲ್ಲಿ ಭಾಗಿಯಾಗಲಿವೆ.
ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ದಸರೆಗಾಗಿ 18 ಆನೆಗಳನ್ನ ಗುರುತಿಸಲಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ. ಹೀಗಾಗಿ ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ಈಗಾಗಲೇ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಗುರುತಿಸಲಾಗಿದೆ.
ಕಾರ್ಯಕ್ರಮದಲ್ಲಿ ತಮಿಳುನಾಡು ಅರಣ್ಯ ಸಚಿವ ಎಮ್.ಮಥಿವೆಂಥನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ದೀಕ್ಷಿತ್, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಮೈಸೂರು ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಪಾಲ್ಗೊಂಡಿದ್ದರು.