Wednesday, November 5, 2025
Flats for sale
Homeರಾಜ್ಯಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಭರ್ಜರಿ ಕಾರ್ಯಾಚರಣೆ,98 ಕೋಟಿ ಮದ್ಯ ವಶ.

ಮೈಸೂರು : ಸಿಎಂ ಸಿದ್ದರಾಮಯ್ಯ ತವರಲ್ಲಿ ಭರ್ಜರಿ ಕಾರ್ಯಾಚರಣೆ,98 ಕೋಟಿ ಮದ್ಯ ವಶ.

ಮೈಸೂರು : ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯರವರು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ವ್ಯಾಪ್ತಿಯ ಇಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ 98ಕೋಟಿ 57 ಲಕ್ಷರೂ ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ. ಈಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಚಾಮರಾಜನಗರ ಲೋಕಸಭಾ ಕ್ಷೇತದ (ಪ.ಜಾ) ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದ
ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ,ಯುನೈಟೆಡ್ ಬ್ರೀವರೀಸ್ ಲಿಮಿಟೆಡ್ ನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರೊAದಿಗೆ ಕಾರ್ಯಾಚರಣೆ ನಡೆಸಿ ಒಟ್ಟಾರೆ 98 ಕೋಟಿ 57 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿ ಬ್ರೀವರಿ ಘಟಕದ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಮಂಗಳವಾರ ಬಂದ ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಲೋಕಸಭಾ ಕ್ಷೇತ್ರ ಇವರು ಮೊಬೈಲ್ ದೂರವಾಣಿ ಮೂಲಕ ನೀಡಿದ ಆದೇಶದ ಅನ್ವಯ ಬ್ರೀವರಿ ಘಟಕಕ್ಕೆ ಭೇಟಿ ನೀಡಿ ಘಟಕದ ದಾಖಲಾತಿಗಳಾದ ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನನ್ನು ಪರಿಶೀಲಿಸಿದಾಗ ಲೆಕ್ಕದ ಪುಸ್ತಕದ ದಾಸ್ತಾನಿಗಿಂತ ೭ ಸಾವಿರ ವಿವಿಧ ಬ್ರಾಂಡಿನ ರಟ್ಟಿನ ಪೆಟ್ಟಿಗೆಗಳ ಬಿಯರ್ ದಾಸ್ತಾನು ಕೊಠಡಿಯಲ್ಲಿ ಹೆಚ್ಚಾಗಿ ಕಂಡು ಬAದಿದೆ.

ಹಿನ್ನೆಲೆಯಲ್ಲಿ ಈ ಕೃತ್ಯವು ಅಬಕಾರಿ ಕಾಯ್ದೆ ಕಲಂ 9, 10, 11, 12, 15 ಖ/ತಿ 32, 34, 38(ಎ), 43 ಮತ್ತು ಕರ್ನಾಟಕ ಬ್ರೀವರಿಯ ಸನ್ನದು ಷರತ್ತುಗಳ ನಿಯಮ 1, 2, 7 ಮತ್ತು 9 ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಬ್ರೀವರಿ 1967 ರ ನಿಯಮ 18 ಮತ್ತು 19 ಬಾಟ್ಲಿಂಗ್ ರೂಲ್ ನಿಯಮ 13 ಕರ್ನಾಟಕ ಅಬಕಾರಿ (ದಾಸ್ತಾನು, ಸಾಗಾಣಿಕೆ, ಆಮದು ಮತ್ತು ರಫ್ತು ಅಮಲು ಪದಾರ್ಥಗಳು) (ಕರ್ನಾಟಕ) ನಿಯಮಗಳು 1967 ರ ನಿಯಮ 7, 89, 3 ಇವುಗಳ ಉಲ್ಲಂಘನೆಯಾಗಿದೆ.

ಕರ್ನಾಟಕ ಅಬಕಾರಿ ಕಾಯ್ದೆ 1965 ರನ್ವಯ ಮದ್ಯದ ಅಕ್ರಮ ದಾಸ್ತಾನು ದಂಡಾರ್ಹ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ. ಬ್ರೀವರಿ ಘಟಕದಲ್ಲಿ ತಯಾರಿಸಿರುವ ಒಟ್ಟು603,644 ರಟ್ಟಿನ ಪೆಟ್ಟಿಗೆಗಳು ಹಾಗೂ ಕೆಗ್ಗಳಲ್ಲಿರುವ 23,160 ಲೀ.ಮತ್ತು ಬಿಬಿಟಿ ಟ್ಯಾಂಕ್‌ನಲ್ಲಿರುವ ದಾಸ್ತಾನು 5,16,700ಲೀ., ಯುಟಿ ಟ್ಯಾಂಕ್‌ನಲ್ಲಿರುವ 66,16,300 ಲೀ., ಸೈಲೋಸ್ ಟ್ಯಾಂಕ್‌ನಲ್ಲಿರುವ ಕಚ್ಚಾವಸ್ತು 6,50,458 ಕೆ.ಜಿ ರಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬ್ರೀವರಿ ಪ್ರಕರಣದಲ್ಲಿ ನಾಪತ್ತೆಯಾಗಿರುವ ೧೭ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿಬೇಕಾಗಿರುತ್ತದೆ.

ಜಪ್ತಿಪಡಿಸಿದ ಸ್ಥಳದ ಕೃತ್ಯವು ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ)ದ ವ್ಯಾಪ್ತಿಗೆ ಒಳಪಡಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿAದ ಅಕ್ರಮ ದಾಸ್ತಾನು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular