Thursday, July 23, 2026
Homeರಾಜಕೀಯಯಾದಗಿರಿ ; ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ.

ಯಾದಗಿರಿ ; ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ.

ಯಾದಗಿರಿ ; ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ಬಿಜೆಪಿ ಯಾ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಯಾದಗಿರಿಯ ಪುರಸಭೆ ಅಧ್ಯಕ್ಷ ರಾಗಿದ್ದು ,2018 ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ರು, 2023 ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ .ಇಂದು ರಾತ್ರಿ ಮುದ್ನಾಳ ಅವರ ಪಾರ್ಥಿವ ಶರೀರವನ್ನು ಯಾದಗಿರಿಗೆ ತೆಗೆದುಕೊಂಡಾಗಳಾಗುತ್ತಿದ್ದು ನಾಳೆ ಸಂಜೆ ಯಾದಗಿರಿ ತಾಲೂಕಿನ ಮುದ್ನಾಳ ಅವರ ಸ್ವ ಗ್ರಾಮದ ಜಮೀನಿನಲ್ಲಿ ಮುದ್ನಾಳ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular