ಯಾದಗಿರಿ : ಭೀಮಾನದಿ ತೀರದ ರೈತರ ಜಮೀನಿಗೆ ಬೃಹತ್ ಮೊಸಳೆಯೊಂದು ನುಗ್ಗಿದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬೀರನಾಳ ಗ್ರಾಮದಲ್ಲಿ ನಡೆದಿದೆ.

ಬೀರನಾಳ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸುರಕ್ಷಿತವಾಗಿ ರಕ್ಷಿಸಿದರು.
ಭೀಮಾ ನದಿ ತೀರದ ಜಮೀನಿಗೆ ಮೊಸಳೆ ನುಗ್ಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಅರಣ್ಯಾಧಿಕಾರಿಗಳ ಸಮಯೋಚಿತ ಕಾರ್ಯಾಚರಣೆಯಿಂದ ಮೊಸಳೆ ರಕ್ಷಿಸಲ್ಪಟ್ಟಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

