Sunday, March 8, 2026
Flats for sale
Homeರಾಜ್ಯರಾಮನಗರ : ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಫಿಕ್ಸ್.

ರಾಮನಗರ : ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಫಿಕ್ಸ್.

ರಾಮನಗರ : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದ್ದು ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು ನಿಂದ ಮೈತ್ರಿಕೂಟ ಕಣಕ್ಕೆ ಇಳಿಸಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ. ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

ಜೆ.ಪಿ ಭವನದಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ನಡೆಸಿದ ಹೆಚ್.ಡಿ ದೇವೇಗೌಡರು ಕಾರ್ಯಕರ್ತರ ಒತ್ತಡಕ್ಕೆ ಮಣೆ ಹಾಕಿದ್ದಾರೆ. ಸಭೆ ಬಳಿಕ ಮಾತನಾಡಿದ ದೇವೇಗೌಡರು, ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular