ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸಾರಿಗೆ ಬಸ್, ಶಾಲಾ ಬಸ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ, ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್ ಮೃತದುರ್ದೈವಿಗಳು.32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಶಾಲೆಯ ಬಸ್ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಗೆ ಎಸ್ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಾಲಾ ಬಸ್ನಲ್ಲಿ ಒಟ್ಟು 32 ಮಕ್ಕಳ ಪೈಕಿ 18 ಜನರಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಪೈಕಿ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.ಇನ್ನು ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕೈ, ಕಾಲು ಛಿದ್ರಗೊಂಡಿವೆ. ಪೋಷಕರು ಘಟನೆ ನಡೆದ ಸ್ಥಳಕ್ಕೆ ಬಂದು ರೋದಿಸಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿ ಬಿಕ್ಕಿ ಬಿಕ್ಕಿ ಅತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆ ಸ್ಪಂದಿಸುತ್ತಿರುವ ಮಕ್ಕಳಿನ್ನು ವಾರ್ಡ್ಗಳಿಗೆ ಶಿಫ್ಟ್ ಮಾಡಲಾಗಿದ್ದು, ಕೆಲವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.


