ರಿಪ್ಪನ್‌ಪೇಟೆ : ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ ತಾಯಿಯಿಂದAತೆ ನಾನು ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿ ಅಯನೂರು ಮಂಜುನಾಥ ಮತ್ತು ಆರ್.ಕೆ.ಸಿದ್ದರಾಮಣ್ಣನವರ ಚಿಲ್ಲರೆ ಪ್ರಶ್ನೆಗಳಿಗೆ ಉತ್ತರಿಸುವ ಗೊಜಿಗೆ ಹೋಗುವುದಿಲ್ಲ ಎಂದರು.ನಾನು ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿದ್ದು ಕೆಳಹಂತದ ಎಲ್ಲ ಕಾರ್ಯಕರ್ತರ ಸಂಪರ್ಕವೂ ನನಗಿದೆ ಈಗಾಗಲೇ ಅಂತರಿಕವಾಗಿ ನನಗೆ ಬೆಂಬಲಿಸುತ್ತಿದ್ದು ಚುನಾವಣಾ ಪ್ರಕ್ರಿಯೆ ನಂತರದಲ್ಲಿ ಬಹಿರಂಗವಾಗಿ ಬಿಜೆಪಿಯಿಂದ ಬಂಡೇದ್ದು ನನ್ನೊಂದಿಗೆ ಸೇರ್ಪಡೆಗೊಳ್ಳಲಿದ್ದಾರೆಂದರು.
ಶೀಘ್ರದಲ್ಲಿಯೇ ಕಾರ್ಯಕರ್ತರ ನೇರ ಸಂಪರ್ಕಕ್ಕೆ ಅನುಕೂಲವಾಗುವಂತೆ ಚುನಾವಣಾ ಪ್ರಚಾರ ಕಛೇರಿಯನ್ನು ರಿಪ್ಪನ್‌ಪೇಟೆಯಲ್ಲಿ ಪ್ರಾರಂಭಿಸಲಾಗುವುದೆAದು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಜಿಲ್ಲಾ ಮುಖಂಡರಾದ ಆರ್.ಟಿ.ಗೋಪಾಲ,ತಮ.ನರಸಿಂಹ,ತರಕಾರಿ ಯೋಗೇಂದ್ರಗೌಡ, ಎಲ್.ನಿರೂಫ್‌ಕುಮಾರ್. ಪವನ್‌ಶೆಟ್ಟಿ,ಕೆ.ಗಣೇಶ್‌ಪ್ರಸಾದ್,ಇನ್ನಿತರ ಮುಖಂಡರು ಇದ್ದರು.