ಲಕ್ನೋ ; ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಉದ್ಯೋಗಳಿಗೆ ಮಾನಸಿಕ ಹಿಂಸೆ ಹೆಚ್ಚಾಗಿದ್ದು ಕೆಲಸದ ಒತ್ತಡದಿಂದ ಸಾವನ್ನಪ್ಪುವ ಘಟನೆ ಹಲವೆಡೆ ವರದಿಯಾಗುತ್ತಿದೆ . ಎಚ್ಡಿಎಫ್ಸಿ ಬ್ಯಾಂಕ್ನ ಮಹಿಳಾ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಲಕ್ನೋ ದ HDFC ಬ್ಯಾಂಕ್ ಕಚೇರಿಯಲ್ಲಿ ನಡೆದಿದೆ.
ಕಚೇರಿಯ ಕೆಲಸದ ಒತ್ತಡದಿಂದ ಕುರ್ಚಿ ಮೇಲೆ ಕುಳಿತೇ ಬ್ಯಾಂಕ್ನ ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದು ಎಂದು ಆಕೆಯ ಸಹೋದ್ಯೋಗಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.ಮಹಿಳೆಯನ್ನು ಸದಾಫ್ ಫಾತಿಮಾ ಎಂದು ಗುರುತಿಸಲಾಗಿದ್ದು, ಅವರು ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಗೋಮ್ಟಿನಗರದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ನ ವಿಬೂತಿ ಖಂಡ್ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೆಪ್ಟೆಂಬರ್ 24 ರಂದು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯಿಂದ ಕೆಳಗೆ ಬಿದ್ದಿದ್ದರು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಟಾರ್ಗೆಟ್ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ನಿದ್ದೆಗೆಟ್ಟು ಮಾನಸಿಕ ಹಿಂಸೆಗೆ ಒಳಗಾಗಿ ಇಂತಹ ಘಟನೆ ನಡೆಯುತ್ತಿದೆ ಇದಕ್ಕೆ ಎಂದು ಸಂಬಂಧ ಪಟ್ಟ ತಜ್ಞರು ತಿಳಿಸಿದ್ದಾರೆ. ಬ್ಯಾಂಕ್ ಉದ್ಯೋಗಿಗಳಿಗೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗಿ ಮಾನಸಿಕ ನೆಮ್ಮದಿ ಕಳೆದು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಕೆದಕರ ಸಂಸ್ಥೆಗಳು ಈ ಬಗ್ಗೆ ಹೆಚ್ಚೆತ್ತು ಮಾನಸಿಕ ಚಿತ್ರಹಿಂಸೆ ಕೊಡೊಬದಲು ಇನ್ನಿತರ ಮಾರ್ಗಮೂಲಕ ಸಮಸ್ಯೆ ಬಗೆಹರಿಸಬೇಕೆಂದು ಹಲವು ಬ್ಯಾಂಕ್ ಉದ್ಯೋಗಿಗಳು ತಿಳಿಸಿದ್ದಾರೆ.