ವಿಜಯಪುರ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಅವರು ಸಿಎಂ ಆಗಿಯೇ ಇರುತ್ತಾರೆ. ಈ ಅವಧಿಯಲ್ಲಿ ಅವರೇ ಮೊದಲ ಹಾಗೂ ಕೊನೆಯ ಸಿಎಂ’’ ಎಂದು ಯತ್ನಾಳ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಸಿದ್ದರಾಮಯ್ಯ ಹೆಸರಿಗೆ ಸಿಎಂ ಆಗಿದ್ದಾರೆ, ಈ ಕಾಂಗ್ರೆಸ್ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಅವರು ಸೂಪರ್ ಸಿಎಂ ಆಗಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಈ ಮಧ್ಯೆ, ಬಿಜೆಪಿಯ ಫೈರ್ಬ್ರಾಂಡ್ ನಾಯಕ ಯತ್ನಾಳ್, ಪಕ್ಷದ ನಾಯಕತ್ವವು ತನಗೆ ಕೆಲಸ ನೀಡಿದರೆ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳಿದ್ದಾರೆ.


