ವಿಜಯಪುರ : ವಿಜಯಪುರ ನಗರ ಹೊರವಲಯದ ಭೂತನಾಳ ಕೆರೆಯಲ್ಲಿ ನಾಲ್ಕಕ್ಕೂ ಅಧಿಕ ಮಂದಿಯ ಶವಗಳು ಪತ್ತೆಯಾಗಿವೆ.
ಪತ್ತೆಯಾದ ಶವಗಳಲ್ಲಿ ಮೂವರು ಮಹಿಳೆಯರ ಶವಗಳು ಸೇರಿವೆ ಎನ್ನಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಕೆರೆಯಿಂದ ಹೊರತೆಗೆದು ಗುರುತು ಪತ್ತೆ ಹಾಗೂ ಹೆಚ್ಚಿನ ತನಿಖೆ ಕೈಗೊಳ್ಳಲಾಗುತ್ತಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ಲಭ್ಯವಾಗಬೇಕಿದೆ.

