ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿಂಗನಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಪರಮೇಶ್ವರ್ ನಾಯ್ಕ ಎಂಬುವವರು ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಮೃತರ ಪತ್ನಿ ಸಂಬಂಧದಲ್ಲಿ ಸಹೋದರನಾಗಬೇಕಿದ್ದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪರಮೇಶ್ವರ್ ನಾಯ್ಕ ಮೌನವಾಗಿದ್ದರು ಎನ್ನಲಾಗಿದೆ.
ಆದರೆ ಇದೇ ವಿಚಾರದಿಂದ ದ್ವೇಷ ಬೆಳೆದು, ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ನಡೆಸಿರುವ ಆರೋಪ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸಿ, ಮೃತರ ಪತ್ನಿಯನ್ನು ಬಂಧಿಸಿದ್ದು, ಇತರ ಆರೋಪಿಗಳ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.


