ಶಿವಮೊಗ್ಗ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಅಪ್ಪಲಿಸಿ ಒಂದು ವರೆ ವರ್ಷದ ಮಗು ಸಾವನ್ನಪ್ಪಿದ್ದು ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟ್ ನಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.

ದಾವಣಗೆರೆಯಿಂದ ಮಂಗಳೂರು ಕಡೆಗೆ ಹೋಗುತಿದ್ದ ಖಾಸಗಿ ಬಸ್ ನಲ್ಲಿ ಸುಮಾರು 33 ಪ್ರಯಾಣಿಕರು ಪ್ರಯಾಣಿಸುತಿದ್ದರು.ಘಟನೆಯಲ್ಲಿ 10 ಜನರು ಗಂಭೀರವಾಗಿ ಗಾಯಗೊಂಡಿರುವ ಮಾಹಿತಿ ದೊರೆತಿದ್ದು ಸ್ಥಳಕ್ಕೆ ಹೊಸನಗರ ತಾಲ್ಲೂಕು ಹುಲಿಕಲ್ ಪೊಲೀಸರು ಭೇಟಿನೀಡಿದ್ದು ನಗರ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.


