ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಜ್ಯೂಸ್ ಬಾಟಲಿ ಮುಚ್ಚಳ ನುಂಗಿಒಂದೂವರೆ ವರ್ಷದ ಮಗು ಉಸಿರಾಟ ಸಮಸ್ಯೆಯಿಂದ ದಾರುಣ ಸಾವನಪ್ಪಿದ ದುರ್ಘಟನೆ ನಡೆದಿದೆ.
ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್(1.5) ಮೃತಪಟ್ಟ ಮಗು.
ಬುಧವಾರ ಬೆಳಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ನಂದೀಶ್ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ನುಂಗಿದ ಮುಚ್ಚಳ ಗಂಟಲಲ್ಲಿ ಸಿಲುಕಿದೆ. ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದೆ ಮಗು ಸಾವನ್ನಪ್ಪಿದೆ. ಉಸಿರಾಟದ ತೊಂದರೆಯಿಂದ ನಂದೀಶ್ ಮೃತಪಟ್ಟಿದ್ದಾನೆ.


