Friday, March 13, 2026
Flats for sale
Homeರಾಜ್ಯಶಿವಮೊಗ್ಗ: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಶಿವಮೊಗ್ಗ: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

ಶಿವಮೊಗ್ಗ: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಕಾಲೇಜು ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ದುರಂತ ಮಂಗಳವಾರ ನಡೆದಿದೆ.ಇಲ್ಲಿನ ಕುವೆಂಪು ರಸ್ತೆಯ ಆದಿಚುಂಚನಗಿರಿಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಚನ್ನಗಿರಿ ತಾಲ್ಲೂಕು ಚೆನ್ನಾಪುರ ಮೂಲದ ದ್ವಿತೀಯ ಪಿಯು ವಿದ್ಯಾರ್ಥಿನಿ ಮೇಘಶ್ರೀ (೧೮) ಎಂಬುವರು ಸಾವಿಗೀಡಾಗಿದ್ದಾರೆ. ಮೇಘಶ್ರೀ ಹೋಮ್‌ಸಿಕ್‌ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಇದನ್ನು ಆಕೆಯ ಪೋಷಕರು ಬಲವಾಗಿ ನಿರಾಕರಿಸಿದ್ದಾರೆ. ನಮ್ಮ ಮಗಳು ವಸತಿ ನಿಲಯದ ವಾರ್ಡನ್ ಮತ್ತು ಕೆಲವರಿಂದ ನೊಂದು ಸಾವಿಗೆ ಶರಣಾಗಿದ್ದಾಳೆ ಅಥವಾ ಆಕೆಯನ್ನು ಕಟ್ಟಡದ ಮೇಲಿಂದ ದೂಡಿರಬಹುದು ಎಂದು ದೂರಿದ್ದಾರೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಪ್ರತಿಭಟನೆ: ಕಾಲೇಜಿನ ಮುಂಭಾಗ ವಿದ್ಯಾರ್ಥಿನಿಯ ಕುಟುಂಬಸ್ಥರು, ಸಂಬAಧಿಗಳು ಹಾಗೂ ಸಾರ್ವಜನಿಕರು ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪೋಷಕರಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular