ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರ ವಸತಿ ಕೋಣೆಗಳು ಕುಡಿಯುವ ನೀರು ಅಡುಗೆ ಕೋಣೆ ಆಹಾರಕ್ಕೆ ಬಳಸುವ ದವಸ ಧಾನ್ಯಗಳನ್ನು ಪರಿಶೀಲಿಸಿದರು
ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿಗಳು ಅನಿರೀಕ್ಷಿತವಾಗಿ ದಿಢೀರ್ ಭೇಟಿ ನೀಡಿದ್ದಾರೆ
ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ವಸತಿ ನಿಲಯದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ತಿಳಿಸುವಂತೆ ಹೇಳಿದರು
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಭೋಜನಾ ಸವಿಯುವುದರ ಮೂಲಕ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿದರು
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವಸತಿ ನಿಲಯದಲ್ಲಿ ನಾವು ವ್ಯವಸ್ಥೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ವಿಜಯಕುಮಾರ್ ಕೆ ಸಮಾಜ ಕಲ್ಯಾಣ ಅಧಿಕಾರಿ ಶೃತಿ ವಸತಿ ನಿಲಯದ ಮೇಲ್ವಿಚಾರಕಿ ಚಂದ್ರಕಲಾ ಸೇರಿ ಇತರರು ಇದ್ದರು


