Tuesday, July 21, 2026
Homeಜಿಲ್ಲೆಸುಳ್ಯ ; ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಎಂಬ...

ಸುಳ್ಯ ; ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪೋಟೋವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಎಂಬ ಪೋಸ್ಟ್ ಹಾಕಿ ನಿಂದನೆ,ದೂರು ದಾಖಲು.

ಸುಳ್ಯ ; ಸಾಮಾಜಿಕ ಜಾಲತಾಣದಲ್ಲಿ ಪೋಟೊ ಬಳಸಿ ಶ್ರದ್ದಾಂಜಲಿ ಎಂಬ ಪೋಸ್ಟ್ ಹಾಕಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ನಿಂದಿಸಿದ ಘಟನೆ ನಡೆದಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರವನ್ನಿ ಬಿಲ್ಲವ ಸಂದೇಶ್ ಎಂಬ ಫೇಸ್ಟುಕ್ ಖಾತೆಯಲ್ಲಿ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಲಾಗಿದೆ.ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.

ಈ ಬಗ್ಗೆ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸುಳ್ಯ ಪೋಲೀಸ್‌ ಠಾಣೆಗೆ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವAತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿಗೆ ಸುಳ್ಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular