ಹಾಸನ : ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ವಿತರಣಾ ಟ್ಯಾಂಕ್ 4ರಲ್ಲಿ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕೂ ಮುನ್ನ ದೊಡ್ಡನಗರ ವಿತರಣಾ ಟ್ಯಾಂಕ್ ಡಿಸಿ-3 ರಿಂದ ಹೆಬ್ಬನಹಳ್ಳಿ ಡಿಸಿ-4 ವರೆಗೆ ನೀರು ಪಂಪ್ ಮಾಡುವ ವ್ಯವಸ್ಥೆಗೆ ಸಿಎಂ ಮತ್ತು ಡಿಸಿಎಂ ಚಾಲನೆ ನೀಡಲಿದ್ದಾರೆ. ಆದರೆ ಗಂಗಾ ಪೂಜೆ ಮತ್ತು ಬಾಗೀನ ಅರ್ಪಣೆ ಕಾರ್ಯಕ್ರಮಕ್ಕೆ ನಿರ್ಮಿಸಿದ ಚಪ್ಪರ ಇಂದು ಉದ್ಘಾಟನೆಯಾ ಮೊದಲೇ ಮುರಿದು ಬಿದ್ದ ಘಟನೆ ನಡೆದಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿಯಲ್ಲಿ ವೇದಿಕೆ ಎದುರಿಗೆ ನಿರ್ಮಿಸಿದ್ದ ಸಿಎಂ, ಡಿಸಿಎಂ ಹಾಗೂ ಸಚಿವರು ನಿಂತು ಬಾಗೀನ ಅರ್ಪಿಸಲು ಮಂಟಪಕ್ಕೆ ನಿರ್ಮಿಸಿದ್ದ ಹೂವಿನಿಂದ ಅಲಂಕಾರ ಮಾಡಿದ್ದ ಚಪ್ಪರ ಮುರಿದು ಬಿದ್ದಿದ್ದು ಉದ್ಘಾಟನೆಯ ಮುನ್ನವೇ ಈ ಘಟನೆ ನಡೆದಿದ್ದಿದು ಸ್ಥಳೀಯರಲ್ಲಿ ಅಸಮಾಧಾನ ಉಂಟಾಗಿದೆ.
ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪತ್ರಕರ್ತರ ವಾಹನ ಬ್ರೇಕ್ ಫೇಲ್ 7 ಮಂದಿಗೆ ಗಾಯ.
ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಚಲಿಸುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಏಳು ಮಂದಿ ಪತ್ರಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಂಡಿದ್ದು, ಸಿಎಂ, ಡಿಸಿಎಂ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.