ಹಾಸನ : ಊಟಕ್ಕೆ ಕುಳಿತುಕೊಳ್ಳುವ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಘಟನೆ ನಡೆದಿದೆ.
ಚೇತನ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದ ದುರ್ದೈವಿ
ನಗರದ ಹಳೇ ಬಸ್ ನಿಲ್ದಾಣ ಸಮೀಪ ಮೊಬೈಲ್ ಅಂಗಡಿ ಚೇತನ್ ಇಟ್ಟುಕೊಂಡಿದ್ದು ಚೇತನ್ ಮೂಲಕತಃ ಕಿಕ್ಕೇರಿ ಮೂಲದವರು.ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮಗು ಜೊತೆ ವಾಸವಿದ್ದು ಊಟಕ್ಕೆ ಕುಳಿತುಕೊಳ್ಳುವಾಗ ಚೇತನ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಹೇಳಿ ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದು ಪತ್ನಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ಸಂದರ್ಭದಲ್ಲಿ ಹೃದಯಾಘಾತದಿಂದ ಚೇತನ್ ಸಾವನ್ನಪ್ಪಿದ್ದಾರೆ.


