ಹಾಸನ : ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಅತ್ಯಂತ ಸಡಗರ, ಸಂತೋಷದಿಂದ ಆಚರಿಸುತ್ತಿದ್ದೇವೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿವೆ ಭಕ್ತರಿಗೆ ಸುಗಮ ದರ್ಶನಕ್ಕೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹಾಸನದಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ದರ್ಶನಕ್ಕೆ ಒಂದು ಕ್ಯೂ, ಟಿಕೆಟ್ ಖರೀದಿಸಿ ಬರುವವರಿಗೆ ದೇವಿ ದರ್ಶನಕ್ಕೆ ಎರಡು ಕ್ಯೂ, ಶಿಷ್ಟಾಚಾರಕ್ಕೆ ಒಂದು ಕ್ಯೂ ಮಾಡಲಾಗಿದೆ,ಗೋಲ್ಡ್ ಕಾರ್ಡ್‌ಗೆ ಸಮಯ ನೀಡಲಾಗಿದೆ,ಬೆಳಿಗ್ಗೆ 10.30 ರಿಂದ 12.30 ರವರೆಗೆ ವಿಐಪಿಗಳಿಗೆ ಮಾತ್ರ ದರ್ಶನವಿರುತ್ತದೆ, ಐದರಿಂದ, ಆರು ಗಣ್ಯರಿಗೆ ಮಾತ್ರ ಶಿಷ್ಟಾಚಾರ ಅನ್ವಯವಾಗುತ್ತದೆ ಎಂದರು
ಗೋಲ್ಡ್ ಕಾರ್ಡ್ ಪಡೆದು ಬರುವವರರಿಗೆ ಬೆಳಿಗ್ಗೆ 7.30 ರಿಂದ 10 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ ಉಳಿದ ಸಮಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನ ಇರುತ್ತದೆ,ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ,120 ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ, ಇವುಗಳ ನಿರ್ವಹಣೆಗೆ ಓರ್ವ ಸಿಬ್ಬಂದಿ ನಿಯೋಜಿಸಲಾಗಿದ ಎಂದರು.
ಆರೋಗ್ಯ ಇಲಾಖೆ, ಅಗ್ನಿಶಾಮಕದಳ, ಪೊಲೀಸ್ ಇಲಾಖೆ ಒಳಗೊಂಡಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ದೇವಸ್ಥಾನದ ಸುತ್ತಲೂ ಪಾದರಕ್ಷೆಗಳನ್ನು ಬಿಡುವಂತಿಲ್ಲ, ಸಾರಿಗೆ, ರೈಲ್ವೆ ನಿಲ್ದಾಣಗಳಲ್ಲಿ ಸೇರಿದಂತೆ ಹಲವೆಡೆ ವ್ಯವಸ್ಥೆ ಮಾಡಲಾಗಿದೆ,ಆನ್‌ಲೈನ್ ಬುಕ್ಕಿಂಗ್, ವ್ಯಾಟ್ಸಪ್ ಚಾಟ್‌ಬಾಟ್ ಪರಿಚಯಿಸಲಾಗಿದೆ,ಎಐ ಟೆಕ್ನಾಲಜಿ ಮೂಲಕ ದೇವಿ ದರ್ಶನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ವಸ್ತಪ್ರದರ್ಶನ, ಡಾಗ್ ಶೋ, ಪಾಕ ಸ್ಪರ್ಧೆ, ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ, ಹನ್ನೆರಡು ಟೂರ್ ಪ್ಯಾಕೇಜ್ ಮಾಡಲಾಗಿದೆ, ಶಿಷ್ಟಾಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದೇವೆ,ವಿಐಪಿಗಳ ಜೊತೆ ಬರುವವರಿಗೆ ನಂಬರ್‌ಗಳನ್ನು ನಿಗದಿ ಮಾಡಲಾಗಿದೆ,ವಿವಿಐಪಿಗಳು ಜೊತೆಯಲ್ಲಿ ನಾಲ್ಕು ಜನರನ್ನು ಕರೆದುಕೊಂಡು ಬರಬಹುದು,ಸಚಿವರು, ವಿಐಪಿಗಳು ತಮ್ಮ ವಾಹನಗಳನ್ನು ಐಬಿಯಲ್ಲಿ ನಿಲ್ಲಿಸಿ ಜಿಲ್ಲಾಡಳಿತದ ವಾಹನದಲ್ಲಿ ದೇವಾಲಯಕ್ಕೆ ಹೋಗಬೇಕು ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಜಿಲ್ಲಾಧಿಕಾರಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.