Thursday, July 23, 2026
Homeಕ್ರೈಂಹುಬ್ಬಳ್ಳಿ : ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಹತ್ಯೆ,ಮಲಗಿದ್ದ 20 ವರ್ಷದ ಯುವತಿಗೆ...

ಹುಬ್ಬಳ್ಳಿ : ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಹತ್ಯೆ,ಮಲಗಿದ್ದ 20 ವರ್ಷದ ಯುವತಿಗೆ ಚಾಕು ಇರಿದು ಕೊಲೆ.

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಯುವತಿಯ ಭೀಕರ ಕೊಲೆ ನಡೆದಿದ್ದು ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ.

ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಅಂಜಲಿ ಅಂಬಿಗೇರಗೆ ವಿಶ್ವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಅದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಅಂಜಲಿ ಅಂಬಿಗೇರ ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ.ಹುಬ್ಬಳ್ಳಿಯ ವೀರಾಪೂರ ಓಣಿ ಯಲ್ಲಿ ಈ ಘಟನೆ ನಡೆಡಿದ್ದು ಅಂಜಲಿ ಮನೆಯಲ್ಲಿ ಮಲಗಿಕೊಂಡಿದ್ದ ಸಮಯದಲ್ಲಿ ಮನೆಗೆ ನುಗ್ಗಿ ಚಾಕು ಇರಿದು ಕೊಲೆ ಮಾಡಿ ಕೊಲೆಗಾರ ಎಸ್ಕೇಪ್ ಆಗಿದ್ದಾನೆ.

ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ,ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular