Saturday, July 25, 2026
Homeರಾಜಕೀಯಹುಬ್ಬಳ್ಳಿ ; ರಾಮಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ನಿರ್ಮೂಲನೆ ಆಗಲ್ಲ ; ಸಂತೋಷ್ ಲಾಡ್.

ಹುಬ್ಬಳ್ಳಿ ; ರಾಮಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ನಿರ್ಮೂಲನೆ ಆಗಲ್ಲ ; ಸಂತೋಷ್ ಲಾಡ್.

ಹುಬ್ಬಳ್ಳಿ : ರಾಮಮಂದಿರದ ಪ್ರಾಣಪ್ರತಿಸ್ಥಾಪನೆ ಯಾದ ದಿನದಿಂದ ಕಾಂಗ್ರೆಸ್ ನಾಯಕರು ದಿನಕ್ಕೋಂದು ಹೇಳಿಕೆ ನೀಡುತ್ತಿದ್ದು ಚರ್ಚೆಗೆಗ್ರಾಸವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆ ಆಗಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆಯಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸಿದಂತ ಅವರು, ಕೇವಲ ರಾಮ, ರಹಿಮ, ಅಪ್ಘಾನಿಸ್ತಾನ, ಪಾಕಿಸ್ತಾನ ಹೆಸರು ಮುಂದೆ ಇಟ್ಟುಕೊಂಡು ಮತ ಕೇಳುವುದಷ್ಟೇ ಮಾಡಿದ್ದಾರೆ, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ನಿರ್ಮಾಣ ಮಾಡಲಾಗಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹೊತ್ತಿನಲ್ಲೇ ರಾಮಮಂದಿರ ವಿಚಾರವನ್ನು ಇಟ್ಟುಕೊಂಡು ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಅದರ ಹೊರತಾಗಿ ಬೇರೆ ಏನೂ ಇಲ್ಲ ಎಂಬುದಾಗಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular