Sunday, April 5, 2026
Flats for sale
Homeಕ್ರೈಂಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ,ಹಿಂದೂ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ...

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ,ಹಿಂದೂ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ, ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ, ಪ್ರಕರಣ ದಾಖಲು‌

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಫೀಸ್ ಮಿಯಾನ್ನವರ್ ಎಂಬಾತನು ಪರಿಚಯದ ಹೆಸರಿನಲ್ಲಿ ಯುವತಿಗೆ ಸಮೀಪವಾಗಿ, ನಂತರ ಅವಳನ್ನು ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದನೆಂಬ ಆರೋಪ ಕೇಳಿಬಂದಿದೆ. ಪ್ರೀತಿಸುವ ನಾಟಕವಾಡಿ ಯುವತಿಯ ವಿಶ್ವಾಸ ಗಳಿಸಿದ ಬಳಿಕ, ಖಾಸಗಿ ಕ್ಷಣಗಳನ್ನು ದುರುಪಯೋಗಪಡಿಸಿಕೊಂಡು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಯು ಯುವತಿಯನ್ನು ಮದುವೆಯಾಗಲು ಒತ್ತಾಯಿಸಿ, ಧಾರವಾಡದಲ್ಲಿ ರಿಜಿಸ್ಟರ್ ಮದುವೆಗೆ ಸಿದ್ಧತೆ ನಡೆಸಿದ್ದಾನೆ ಎನ್ನಲಾಗಿದೆ. ಕಳೆದ ಆಗಸ್ಟ್‌ನಲ್ಲಿ ಮದುವೆ ನೋಂದಣಿಗೆ ಮುಂದಾದ ವೇಳೆ, ವಿಷಯ ತಿಳಿದ ಯುವತಿಯ ಪೋಷಕರು ಮಧ್ಯಪ್ರವೇಶಿಸಿ ಮದುವೆಯನ್ನು ನಿಲ್ಲಿಸಿದ್ದರು.
ಇದಾದ ಬಳಿಕವೂ ಆರೋಪಿಯು ಯುವತಿಯನ್ನು ಮತ್ತೆ ಬ್ಲ್ಯಾಕ್‌ಮೇಲ್ ಮಾಡುತ್ತಾ, ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ. ಇದೇ ವೇಳೆ, ಯುವತಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭ ಮನೆಗೆ ನುಗ್ಗಿ ಮತ್ತೆ ದೌರ್ಜನ್ಯ ಎಸಗಿದನೆಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಕುರಿತು ಸಂತ್ರಸ್ತ ಯುವತಿ ಹಿಂದೂ ಸಂಘಟನೆಗಳ ನೆರವಿನಿಂದ ಪೊಲೀಸರಿಗೆ ದೂರು ನೀಡಿದ್ದು, ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular